ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಜಯ ಹಿನ್ನೆಲೆ ಕಲ್ಲು ತೂರಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಪೋಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.