ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೋನಾ ಮೂರನೇ ಆತಂಕದ ನಡುವೆಯೂ ಶಾಲೆಗಳನ್ನು ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು.
ಆದರೆ, ಶಾಲೆಗಳನ್ನು ತೆರೆಯುವುದೇ ದೊಡ್ಡ ಸವಾಲು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆಗಳನ್ನು ತೆರೆಯಬೇಕಾದ ಅನಿವಾರ್ಯತೆಯಿದೆ. ಪೋಷಕರು ಕೂಡ ಶಾಲೆಗಳನ್ನು ತೆರೆಯುವಂತೆ ಮನವಿ ಮಾಡಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳು ನಡೆಯದಿರುವುದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೆಲವು ಮಕ್ಕಳು ಕೆಲಸಕ್ಕೆ ಹೋಗುತ್ತಿದ್ದಾರೆ. ಇದೊಂದು ಆಘಾತಕಾರಿ ಬೆಳವಣಿಗೆಯಾಗಿದೆ. ಹೀಗಾಗಿ, 9 ರಿಂದ 12ನೇ ತರಗತಿವರೆಗೆ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದರು.
ಕೊರೋನಾ ಮೂರನೇ ಅಲೆ ನಡುವೆ ಶಾಲೆಗಳನ್ನು ತೆರೆಯುವುದು ದೊಡ್ಡ ಸವಾಲಾಗಿದೆ. ಆದರೆ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರ ಮನವಿ ಮೇರೆಗೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಾಲೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.