ಬೆಂಗಳೂರು: ರಾಜ್ಯಕ್ಕೆ ಬೇಡಿಕೆಗೆ ಅನುಗುಣವಾಗಿ ಕೊವ್ಯಾಕ್ಸಿನ್ ಲಸಿಕೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಲಸಿಕೆಯನ್ನು ನೀಡಲಾಗುವುದು ಎಂದು ಹೇಳಲಾಗಿದೆ.
ರಾಜ್ಯಕ್ಕೆ ಬೇಡಿಕೆ ಅನುಸಾರ ಲಸಿಕೆ ಬಾರದ ಹಿನ್ನೆಲೆಯಲ್ಲಿ ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಬಳಸಲು ಸರ್ಕಾರ ನಿರ್ಧರಿಸಿದೆ. ಮೊದಲ ಡೋಸ್ ಕೊವ್ಯಾಕ್ಸಿನ್ ಪಡೆದವರಿಗೆ ಮಾತ್ರ ಇದೆ ಲಸಿಕೆಯನ್ನು ಎರಡನೇ ಡೋಸ್ ಪಡೆಯುವವರಿಗೆ ಕೊಡಲಾಗುತ್ತದೆ.
45 ವರ್ಷ ಮೇಲ್ಪಟ್ಟ ಮೊದಲ ಡೋಸ್ ಪಡೆಯುವವರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಪ್ರಸ್ತುತ ಇರುವ ಕೋವಿಶೀಲ್ಡ್ ಲಸಿಕೆಗಳಲ್ಲಿ ಶೇಕಡ 70ರಷ್ಟು ಎರಡನೇ ಡೋಸ್ ಬಾಕಿ ಉಳಿದ 45 ವರ್ಷ ಮೇಲ್ಪಟ್ಟವರಿಗೆ ಕೊಡಲಾಗುತ್ತದೆ. ಉಳಿದ ಲಸಿಕೆಗಳನ್ನು ಮೊದಲ ಡೋಸ್ ಪಡೆಯುವವರೆಗೆ ನೀಡಲಾಗುವುದು ಎಂದು ಹೇಳಲಾಗಿದೆ.