
ಬೆಳಗಾವಿ: ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.
ಸಕ್ಕರೆ ಕಾರ್ಖಾನೆ ಬಾಯ್ಲರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಸಮಯದಲ್ಲಿ ಮುಗಿಲೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದ್ದು, ಹೊತ್ತಿ ಉರಿದಿದೆ. ಘಟನೆಯಲ್ಲಿ 24 ಟನ್ ಬಾಯ್ಲರ್ ಸುಟ್ಟು ಭಸ್ಮವಾಗಿದೆ.
ಘಟನಾ ಸ್ಥಳಕ್ಕೆ 9 ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದದಲ್ಲಿ ನಿರತವಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 5 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.