ಧಾರವಾಡ : ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 10ಕ್ಕೂ ಹೆಚ್ಚು ರೈತರ 50ಕ್ಕೂ ಹೆಚ್ಚು ಎಕರೆ ಭೂಮಿಯಲ್ಲಿ ಬೆಳೆದು ನಿಂತಿದ್ದ ಕಬ್ಬು ನಾಶವಾಗಿರುವ ಘಟನೆ ನಡೆದಿದೆ.
ಈ ಘಟನೆ ತಾಲೂಕಿನ ದೇವರ ಹುಬ್ಬಳ್ಳಿಯಲ್ಲಿ ನಡೆದಿದೆ. ತೋಟದಲ್ಲಿ ಹಾದು ಹೋಗಿರುವ ವಿದ್ಯಾತ್ ತಂತಿಯ ಸ್ಪರ್ಶದಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಎಲ್ಲಾ ರೈತರು, ಸಣ್ಣ ವ್ಯಾಪಾರಿಗಳ ಸಾಲ ಮನ್ನಾ; ಸಂಕಷ್ಟದಲ್ಲಿರುವ ಕುಟುಂಬಗಳಿಗೆ 25 ಸಾವಿರ ರೂ.; ಪ್ರಿಯಾಂಕಾ ಗಾಂಧಿ ಭರವಸೆ
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಕೂಡಲೇ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಳೆದು ನಂತಿದ್ದ ಕಬ್ಬು ಬೆಂಕಿಗೆ ಆಹುತಿಯಾಗಿದ್ದಕ್ಕೆ ರೈತರು ಕಂಗಾಲಾಗಿದ್ದಾರೆ. ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.