
ಧಾರವಾಡ: ಆಕಸ್ಮಿಕ ಬೆಂಕಿ ತಗುಲಿ 6 ಎಕರೆ ಪ್ರದೇಶದಲ್ಲಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದ ಬಳಿ ಅಪಾರ ಪ್ರಮಾಣದ ಬೆಳೆ ಬೆಂಕಿಗಾಹುತಿಯಾಗಿದೆ.
ಗ್ರಾಮದ 11 ರೈತರಿಗೆ ಸೇರಿದ ಕಬ್ಬು ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನಂದಿಸಲು ಸಾಧ್ಯವಾಗದೇ ಹತ್ತಾರು ಎಕರೆ ಪ್ರದೇಶದಲ್ಲಿದ್ದ ಬೆಳೆ ಬೆಂಕಿಗಾಹುತಿಯಾಗಿದೆ. ಲಕ್ಷಾಂತರ ರೂ. ನಷ್ಟವುಂಟಾಗಿದೆ. ಕೈಗೆ ಬಂದ ಬೆಳೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ.