alex Certify ಶಾರ್ಟ್ ಸರ್ಕ್ಯೂಟ್ ನಿಂದ 7 ರೈತರಿಗೆ ಸೇರಿದ 26 ಎಕರೆ ಕಬ್ಬು ಸುಟ್ಟು ಭಸ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾರ್ಟ್ ಸರ್ಕ್ಯೂಟ್ ನಿಂದ 7 ರೈತರಿಗೆ ಸೇರಿದ 26 ಎಕರೆ ಕಬ್ಬು ಸುಟ್ಟು ಭಸ್ಮ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ 26 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಶಿರಹಟ್ಟಿಯ 7 ರೈತರಿಗೆ ಸೇರಿದ ಕಬ್ಬು ಬೆಳೆ ಹಾನಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ತಗುಲಿದ ಬೆಂಕಿ ಅಕ್ಕಪಕ್ಕದ ಕಬ್ಬಿನ ಗದ್ದೆಗಳಿಗೆ ವ್ಯಾಪಿಸಿದ್ದು, ಬೆಂಕಿ ಕೆನ್ನಾಲಗೆಯಿಂದ ಸಂಪೂರ್ಣ ಸುಟ್ಟು ಕರಕಲಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 20 ಲಕ್ಷ ರೂ.ಗೂ ಅಧಿಕ ಮೌಲ್ಯದ ಹಾನಿಯಾಗಿದೆ. ಮಳೆ ಇಲ್ಲದೇ ಮೊದಲೇ ಸಂಕಷ್ಟದಲ್ಲಿದ್ದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.  ಬೆಂಕಿಯಿಂದ ಕಬ್ಬು ಬೆಳೆ ಹಾನಿಗೀಡಾಡದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಲಾಗಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...