
ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ.
ಕಬ್ಬು ನುರಿಯುವ ಗಾಣದ ಯಂತ್ರಕ್ಕೆ ಸಿಲುಕಿ ಕಾರ್ಮಿಕನ ರುಂಡ-ಮುಂಡ ಬೇರೆಯಾಗಿದೆ. ಉತ್ತರಪ್ರದೇಶ ಮೂಲದ ಸುಶೀಲ್(40) ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ.
ನಾಗನಗೌಡ ಎಂಬವರಿಗೆ ಸೇರಿದ್ದ ಕಬ್ಬು ನುರಿಯುವ ಗಾಣವನ್ನು ಗುತ್ತಿಗೆ ಪಡೆದು ಅವರು ಕಾರ್ಯನಿರ್ವಹಿಸುತ್ತಿದ್ದರು. ಯಂತ್ರಕ್ಕೆ ಗ್ರೀಸ್ ಹಚ್ಚುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿ ಅವರು ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.