alex Certify ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯಿಂದ ಕಿರುಕುಳ, ದುಡುಕಿದ ಪ್ರಿಯಕರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯಿಂದ ಕಿರುಕುಳ, ದುಡುಕಿದ ಪ್ರಿಯಕರ

ಶಿವಮೊಗ್ಗ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯಿಂದ ಕಿರುಕುಳಕ್ಕೆ ಒಳಗಾದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತನ ಪತ್ನಿ ಈ ಕುರಿತಾಗಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಸಾಗರ ತಾಲೂಕಿನ ದಾಸಕೊಪ್ಪ ಗ್ರಾಮದ ವ್ಯಕ್ತಿ ಅದೇ ಊರಿನ 35 ವರ್ಷದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದು, ಇಬ್ಬರ ನಡುವೆ ಜಗಳವಾಗಿ ಗ್ರಾಮಸ್ಥರು ಪಂಚಾಯಿತಿ ನಡೆಸಿದ್ದಾರೆ. ಕೆಲದಿನಗಳ ಹಿಂದೆ ಮತ್ತೆ ಇಬ್ಬರ ನಡುವೆ ಸಂಬಂಧ ಬೆಳೆದಿದೆ.

ಆಗ ಮಹಿಳೆಯ ಭಾವಮೈದುನನೊಂದಿಗೆ ಜಗಳವಾಗಿದೆ. ಹಣಕ್ಕಾಗಿ ಪೀಡಿಸುತ್ತಿದ್ದ ಮಹಿಳೆ ಕೂಡ ಹೆಚ್ಚಿನ ಹಣ ಕೊಡದಿದ್ದರೆ ಲೈಂಗಿಕ ಕಿರುಕುಳ, ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾಳೆ ಇದರಿಂದ ಬೆದರಿದ ವ್ಯಕ್ತಿ ವಿಷ ಸೇವಿಸಿದ್ದಾರೆ. ಆತನನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...