
ಬೆಂಗಳೂರು: ನೆಟ್ಟಿಗೆರೆ ಬಳಿ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಘಟನೆ ನಡೆದಿದೆ.
ಡೆತ್ ನೋಟ್ ಬರೆದಿಟ್ಟು 47 ವರ್ಷದ ಪ್ರದೀಪ್ ಕಾರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸಿಯಾಗಿರುವ ಪ್ರದೀಪ್ ಪ್ರಭಾವಿ ರಾಜಕಾರಣಿ, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಡೆತ್ ನೋಟ್ ನಲ್ಲಿ ಅವರು ಹಲವು ವಿಷಯ ಪ್ರಸ್ತಾಪಿಸಿದ್ದು, ಮಾಜಿ ಸಚಿವ ಅರವಿಂದ ಲಿಂಬಾವಳಿ, ಜಿ. ರಮೇಶ ರೆಡ್ಡಿ, ಕೆ. ಗೋಪಿ, ಜಯರಾಮರೆಡ್ಡಿ, ರಾಘವಭಟ್ ಮತ್ತು ಸೋಮಯ್ಯ ಅವರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಆರು ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಬರೆಯಲಾಗಿದೆ. ಹೆಸರುಗಳ ಮುಂದೆ ಮೊಬೈಲ್ ನಂಬರ್ ಬರೆದು ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ. ಗೋಪಿ ಮತ್ತು ಸೋಮಯ್ಯ ಅವರಿಗೆ ಅರವಿಂದ ಲಿಂಬಾವಳಿ ಬೆಂಬಲ ನೀಡಿದ್ದರು. ಹಣಕಾಸಿನ ವ್ಯವಹಾರದಲ್ಲಿ ವಂಚನೆ ಹಿನ್ನೆಲೆ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಆರು ಜನರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.