
ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30 ವರ್ಷದ ದಿವ್ಯಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಿಪಾಳ್ಯ ಪತಿಯ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2014ರಲ್ಲಿ ಟೆಕ್ಕಿ ಅರವಿಂದ್ ಜೊತೆಗೆ ದಿವ್ಯಾ ಮದುವೆಯಾಗಿತ್ತು. ಮದುವೆಯ ಬಳಿಕ ಗಂಡನ ಕುಟುಂಬದವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿತ್ತು. ಗಂಡ ಮತ್ತು ಆತನ ಕುಟುಂಬದವರು ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಮೃತ ದಿವ್ಯಾ ಪೋಷಕರು ಹಲಸೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಹಲಸೂರು ಪೊಲೀಸರು ಅರವಿಂದ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.