ಟರ್ಕಿ ಸಂಸತ್ ಭವನದ ಬಳಿ ಆತ್ಮಾಹುತಿ ಬಾಂಬ್ ಸ್ಪೋಟಿಸುವ ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ ಆಗಿದೆ.
ಇಬ್ಬರು ಭಯೋತ್ಪಾದಕರು ದಾಳಿ ನಡೆಸಿದ ವಿಡಿಯೋ ವೈರಲ್ ಆಗಿದೆ. ದಾಳಿಕೋರರಲ್ಲಿ ಒಬ್ಬರು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು, ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಎರಡನೇ ದಾಳಿಕೋರ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಈಗ ವೈರಲ್ ಆಗಿರುವ ದೃಶ್ಯ ಸಿಸಿಟಿವಿ ಸೆರೆಯಾಗಿದೆ. ಅಪರಿಚಿತ ವ್ಯಕ್ತಿಗಳು ಆಂತರಿಕ ಸಚಿವಾಲಯದ ಜನರಲ್ ಡೈರೆಕ್ಟರೇಟ್ ಆಫ್ ಸೆಕ್ಯುರಿಟಿಯ ಪ್ರವೇಶ ದ್ವಾರದ ಮುಂದೆ ವಾಹನವನ್ನು ನಿಲ್ಲಿಸಿ ನಂತರ ಬಂದು ಸ್ಪೋಟಿಸುತ್ತಿರುವುದನ್ನು ನೀವು ನೋಡಬಹುದಾಗಿದೆ.