ಧಾರವಾಡ: ಗ್ರಾಮ ಪಂಚಾಯಿತಿ ಚುನಾವಣೆ ಮತದಾನದ ದಿನವೇ ಅಭ್ಯರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನಲ್ಲಿ ನಡೆದಿದೆ.
ಗರಗ ಗ್ರಾಮ ಪಂಚಾಯಿತಿಯ ಅಭ್ಯರ್ಥಿ ದಾಮೋದರ ಎಲಿಗಾರ(32) ಮೃತಪಟ್ಟವರು ಎಂದು ಹೇಳಲಾಗಿದೆ. ಎರಡನೇ ವಾರ್ಡ್ ನಿಂದ ಸ್ಪರ್ಧಿಸಿದ್ದ ಬಿಜೆಪಿ ಕಾರ್ಯಕರ್ತ ದಾಮೋದರ ಬೆಳಿಗ್ಗೆ ಮತಗಟ್ಟೆಗೆ ಆಗಮಿಸಿ ವಾಪಸ್ ಮನೆಗೆ ತೆರಳಿದ್ದು, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.