ವಿಜಯಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ಸಂಪಿಗೆ ಹಾರಿ ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ ಘಟನೆ ನಡೆದಿದೆ. ನೀರಿನ ಸಂಪಿಗೆ ಹಾರಿ ತಾಯಿ ಗೀತಾ ರಾಮು ಚೌಹಾಣ್(32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಾದ ಸೃಷ್ಟಿ(6), ಕಿಶನ್(3), ಸಮರ್ಥ(4) ಮೃತಪಟ್ಟವರು ಎಂದು ಹೇಳಲಾಗಿದೆ.
ನಿನ್ನೆ ರಾತ್ರಿ ಪತಿ ರಾಮು ಜೊತೆಗೆ ಜಗಳ ಮಾಡಿದ್ದ ಗೀತಾ ಘಟನೆಯ ಬಳಿಕ ಮಕ್ಕಳ ಜೊತೆ ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ತಿಕೋಟಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.