alex Certify ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ

ವಿಜಯಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ಸಂಪಿಗೆ ಹಾರಿ ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ ಘಟನೆ ನಡೆದಿದೆ. ನೀರಿನ ಸಂಪಿಗೆ ಹಾರಿ ತಾಯಿ ಗೀತಾ ರಾಮು ಚೌಹಾಣ್(32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಾದ ಸೃಷ್ಟಿ(6), ಕಿಶನ್(3), ಸಮರ್ಥ(4) ಮೃತಪಟ್ಟವರು ಎಂದು ಹೇಳಲಾಗಿದೆ.

ನಿನ್ನೆ ರಾತ್ರಿ ಪತಿ ರಾಮು ಜೊತೆಗೆ ಜಗಳ ಮಾಡಿದ್ದ ಗೀತಾ ಘಟನೆಯ ಬಳಿಕ ಮಕ್ಕಳ ಜೊತೆ ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ತಿಕೋಟಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...