
ಕಪಿಲಾ ನದಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹಿಮ್ಮಾವುಹುಂಡಿ ಗ್ರಾಮದ ದಂಪತಿ ಆತ್ಮಹತ್ಯೆ ಮಾಡಿಕೊಂಡವರೆಂದು ಹೇಳಲಾಗಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಿಮ್ಮಾವುಹುಂಡಿ ಗ್ರಾಮದ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಲಂಬೂರು ಬಳಿ ಪತ್ನಿ ಶೋಭಾ ಮೃತದೇಹ ಪತ್ತೆಯಾಗಿದೆ. ಪತಿ ಬಸವರಾಜು ಶವಕ್ಕಾಗಿ ಹುಡುಕಾಟ ನಡೆಸಲಾಗಿದೆ. ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದೆ.