ಉಡುಪಿ: ಕಾಪು ಲೀಲಾಧರ ಶೆಟ್ಟಿ, ವಸುಂಧರಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಪುವಿನ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಡುಪಿ ಜಿಲ್ಲೆ ಕಾಪು ತಾಲೂಕಿನಲ್ಲಿ ಲೀಲಾಧರ ಶೆಟ್ಟಿ ಸಮಾಜಸೇವಕರಾಗಿ ಹೆಸರು ಮಾಡಿದ್ದಾರೆ. ಸೇವಾ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದರು. ಒಮ್ಮೆ ಕಾಪು ವಿಧಾನಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.
ಸರಳ ವ್ಯಕ್ತಿತ್ವದ ಲೀಲಾಧರ ಶೆಟ್ಟಿ, ಕಾಪು ರಂಗ ತರಂಗ ತಂಡದ ಮೂಲಕ ಕ್ರಿಯಾಶೀಲರಾಗಿದ್ದರು. ಅಶಕ್ತರ ನೆರವಿಗೆ ಮುಂದಾಗುತ್ತಿದ್ದರು. ಸಮಾಜದ ಬಗ್ಗೆ ಕಾಳಜಿ ಹೊಂದಿದ್ದರು. ದಂಪತಿ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.