alex Certify BREAKING: ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ

ಬಾಗಲಕೋಟೆ: ಮೂವರು ಪುತ್ರಿಯರಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದ ಮನೆಯಲ್ಲಿ ಘಟನೆ ನಡೆದಿದೆ. ರೇಖಾ(28), ಸನ್ನಿಧಿ(7), ಸಮೃದ್ಧಿ(4), ಶ್ರೀನಿಧಿ(2) ಮೃತಪಟ್ಟವರು ಎಂದು ಹೇಳಲಾಗಿದೆ.

ಮೂವರು ಹೆಣ್ಣು ಮಕ್ಕಳಾಗಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದ ರೇಖಾ ಅವರು ಮಕ್ಕಳನ್ನು ಬೆಳೆಸುವುದು, ಓದಿಸುವುದು, ಮದುವೆ ಮಾಡುವುದು ಕಷ್ಟವೆಂದು ಚಿಂತೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ಅವರು ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಾವಿನ ಹಣ್ಣಿನ ರಸದಲ್ಲಿ ರಾಸಾಯನಿಕ ಬೆರೆಸಿ ಮಕ್ಕಳಿಗೆ ಕುಡಿಸಿ ರೇಖಾ ಬಗಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...