ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ 29 ವರ್ಷದ ಖತಿಜಾ ಅವರ ಮೃತದೇಹ ಪತ್ತೆಯಾಗಿದೆ.
ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಮೃತ ಖತಿಜಾ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಪತಿ ಮೆಹಬೂಬ್ ಶರೀಫ್, ಮಾವ ಮತ್ತು ನಾದಿನಿಯನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.