alex Certify ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರಲ್ಲಿ ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರಲ್ಲಿ ನಾಲ್ವರು ಸಾವು

ಕೋಲಾರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಗೋತ್ರಿ(17), ಬಾಬು(45), ನಾರಾಯಣಮ್ಮ(60), ಮುನಿಯಪ್ಪ(65) ಕೊನೆಯುಸಿರೆಳೆದಿದ್ದಾರೆನ್ನಲಾಗಿದೆ.

ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆ ನಿವಾಸಿಗಳಾಗಿದ್ದ ಇವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಿನ್ನೆ ಮಗು ಅಪಹರಣ ಕೇಸ್ ಸಂಬಂಧ ಪೊಲೀಸರಿಗೆ ಹೆದರಿ ಒಂದೇ ಕುಟುಂಬದ ಈ ಐವರು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದ್ದು, ತೀವ್ರ ಅಸ್ವಸ್ಥಗೊಂಡಿರುವ ಪುಷ್ಪಾ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ಗಲ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...