ಬೆಂಗಳೂರು: ಒಂದೇ ಕುಟುಂಬದ ಮೂವರು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ.
ಇಬ್ಬರು ಮಕ್ಕಳೊಂದಿಗೆ ತಾಯಿ ವಸಂತಾ(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಶವಂತ(15) ಮತ್ತು ನಿಶ್ಚಿತಾ(6) ತಾಯಿಯೊಂದಿಗೆ ಉಸಿರು ಚೆಲ್ಲಿದ್ದಾರೆ.
ಒಂದು ವರ್ಷದ ಹಿಂದೆ ವಸಂತಾ ಅವರ ಪತಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದಾಗಿ ಕುಟುಂಬ ಸಂಕಷ್ಟದಲ್ಲಿತ್ತು. ಸಾಲದ ಹೊರೆ ಮತ್ತು ಮಾನಸಿಕ ಖಿನ್ನತೆಯಿಂದ ಈ ರೀತಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.