alex Certify ಗೋಲಗುಮ್ಮಟದ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋಲಗುಮ್ಮಟದ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ

ವಿಜಯಪುರ: ಗೋಲಗುಮ್ಮಟದ ಒಳಗಿನ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ನಗರದ ವಿಶ್ವವಿಖ್ಯಾತ ಗೋಳಗುಮ್ಮಟದ 7ನೇ ಮಹಡಿಯ ಪಿಸುಗುಡೋ ಗ್ಯಾಲರಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಂದಾಜು 23 ವರ್ಷದ ಅಪರಿಚಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತ ಯುವತಿಯ ಹೆಸರು, ವಿಳಾಸ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಅಪರಿಚಿತ ಯುವತಿಯ ಮೃತ ದೇಹವನ್ನು ವಿಜಯಪುರದ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಗೋಲಗುಮ್ಮಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...