alex Certify ಕಿರುಕುಳಕ್ಕೆ ಬೇಸತ್ತು ಉದ್ಯೋಗಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿರುಕುಳಕ್ಕೆ ಬೇಸತ್ತು ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು: ಕಿರುಕುಳಕ್ಕೆ ಬೇಸತ್ತು ಖಾಸಗಿ ಕಂಪನಿಯ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವೇಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ತಾನು ವಾಸವಾಗಿದ್ದ ರೂಮ್ ನಲ್ಲಿ ಸಾವಿಗೆ ಮೊದಲು ವಿವೇಕ್ ಕುಮಾರ್ ಸೆಲ್ಫಿ ವಿಡಿಯೋ ಮಾಡಿದ್ದಾರೆ. ತನಗೆ ಕಿರುಕುಳ ನೀಡಿದ ಮೂವರು ಅಧಿಕಾರಿಗಳ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ವಿಡಿಯೋ ಮಾಡಿ ವಿವೇಕ್ ಯೂಟ್ಯೂಬ್ ಗೆ ಅಪ್ಲೋಡ್ ಮಾಡಿ ನಂತರ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲ್ಯಾಂಡ್ ಮಾರ್ಕ್ ಗ್ರೂಪ್ ಮಾಲೀಕತ್ವದ ಲೈಫ್ ಸ್ಟೈಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಉದ್ಯೋಗಿಯಾಗಿರುವ ವಿವೇಕ್ ಕಂಪನಿಯ ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ. ಕೆಲಸದ ವೇಳೆಯಲ್ಲಿ ಮೂವರು ಅಧಿಕಾರಿಗಳು ಕಿರುಕುಳ ನೀಡಿದ್ದಾಗಿ ದೂರಿದ್ದಾರೆ. ಅವರ ಕಿರುಕುಳಕ್ಕೆ ಬೇಸತ್ತು ವಿವೇಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿಗೆ ಸಂಬಂಧಿಸಿದಂತೆ ಹೆಚ್.ಎ.ಎಲ್. ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ. ಓರ್ವ ಆರೋಪಿಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...