ಶಿವಮೊಗ್ಗ: ಪ್ರೀತಿಸಿ ಮದುವೆಯಾಗಿದ್ದ ಯುವಕ ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 26 ವರ್ಷದ ಚೇತನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ನಿದಿಗೆ ನಿವಾಸಿಯಾಗಿರುವ ಚೇತನ್ ಕುಮಾರ್ ಇತ್ತೀಚೆಗೆ ಪ್ರೀತಿಸಿ ಮದುವೆಯಾಗಿದ್ದರು. ಎಲ್ಲಿಯೂ ಕೆಲಸ ಸಿಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದು, ಅವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.