alex Certify ಶಾಸಕರ ಮನೆಯ ಆವರಣದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ವಾಚ್ ಮ್ಯಾನ್ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕರ ಮನೆಯ ಆವರಣದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ವಾಚ್ ಮ್ಯಾನ್ ಶವ ಪತ್ತೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ವಾಚ್ ಮ್ಯಾನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಲಬುರಗಿಯ ಶರಣನಗರದಲ್ಲಿರುವ ಅಜಯ್ ಸಿಂಗ್ ನಿವಾಸದ ವಾಚ್ ಮ್ಯಾನ್ ದೇವೇಂದ್ರ(32) ಮೃತಪಟ್ಟವರು. ಕಳೆದ ನಾಲ್ಕೈದು ವರ್ಷಗಳಿಂದ ಅಜಯ್ ಸಿಂಗ್ ನಿವಾಸದಲ್ಲಿ ವಾಚ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ದೇವೇಂದ್ರ ಬುಧವಾರ ತಡರಾತ್ರಿ ನೇಣು ಹಾಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಳಿಗ್ಗೆ ಅಡುಗೆ ತಯಾರಿಸುವವರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬ್ರಹ್ಮಪೂರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...