
ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ. ಮದುವೆಯಾದ ನಾಲ್ಕೇ ದಿನಕ್ಕೆ ಯುವತಿ ಬಾಗೇಪಲ್ಲಿಯ ಲಾಡ್ಜ್ ಒಂದರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಅಟ್ಟಹಳ್ಳಿ ನಿವಾಸಿಯಾಗಿರುವ 25 ವರ್ಷದ ಯುವತಿ ಯಲಹಂಕದ ಬಾಗಲೂರು ಕ್ರಾಸ್ ನಿವಾಸಿಯಾಗಿರುವ ಯುವಕನನ್ನು ಪ್ರೀತಿಸಿದ್ದು, ನಾಲ್ಕು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.