ಮೈಸೂರು: ಇಬ್ಬರು ಮಕ್ಕಳೊಂದಿಗೆ ನೇಣುಹಾಕಿಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ತಾಯಿ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 32 ವರ್ಷದ ಸರೋಜಾ, ಮಕ್ಕಳಾದ ಗೀತಾ(6), ಕುಸುಮಾ(4) ಮೃತಪಟ್ಟವರು ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.