ತುಮಕೂರು: ನಾಲೆಗೆ ಹಾರಿ ಎಇಇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮಲಾಪುರ ಗೇಟ್ ಬಳಿ ನಾಲೆಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸೋಮಲಾಪುರ ಗೇಟ್ ಬಳಿ ಇಂಜಿನಿಯರ್ ರಮೇಶ್ ಅವರ ಪತ್ನಿ ಮಮತಾ ಮತ್ತು ಪುತ್ರಿ ಶುಭಾ ಮೃತದೇಹ ಪತ್ತೆಯಾಗಿದ್ದು, ರಮೇಶ್ ಅವರಿಗಾಗಿ ಶೋಧ ಮುಂದುವರೆಸಲಾಗಿದೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ಮೂವರು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೇಳುರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಮೇಶ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೇಮಾವತಿ ನಾಲಾ ವಿಭಾಗದ ಎಂಜಿನಿಯರ್ ಆಗಿರುವ ರಮೇಶ್ ತುಮಕೂರಿನಲ್ಲಿ ವಾಸವಾಗಿದ್ದರು. 15 ದಿನಗಳ ಹಿಂದೆ ಮಗಳ ಮದುವೆ ಮಾಡಿದ್ದರು. ಪತ್ನಿ, ಮದುವೆಯಾಗಿದ್ದ ಮಗಳೊಂದಿಗೆ ಆಗಮಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.