alex Certify ಪೊಲೀಸ್ ಠಾಣೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಠಾಣೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪೊಲೀಸ್ ಠಾಣೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲಾಗಿದೆ.

ಹಳೆಮೂಡಿಗೆರೆ ಗ್ರಾಮದ ಶಿಲ್ಪಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ಗುರುತಿಸಲಾಗಿದೆ. 2022ರಲ್ಲಿ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಶಿಲ್ಪಾ ವಿರುದ್ಧ ಕೆಸು  ದಾಖಲಾಗಿತ್ತು. ಶಿಲ್ಪಾ ಮತ್ತು ಸಹೋದರಿ ನಡುವೆ ಗಲಾಟೆ ನಡೆದಿದ್ದು, ದೂರು ನೀಡಲು ಬಂದಾಗ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರೆನ್ನಲಾಗಿದ್ದು, ಈ ಸಂಬಂಧ ಶಿಲ್ಪಾ ವಿರುದ್ಧ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಒಂದು ವರ್ಷದಿಂದ ಕೋರ್ಟ್ ಗೆ ಹಾಜರಾಗದ ಶಿಲ್ಪಾಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಕೋರ್ಟ್ ಸಮನ್ಸ್ ಹಿಡಿದು ಠಾಣೆಯ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಿಲ್ಪಾ ಆತ್ಮಹತ್ಯೆಗೆ ಯತ್ನಿಸಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...