ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜ್ಯೋತಿ(25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. ಮಕ್ಕಳಾದ ಸಾನ್ವಿ(2) ಹಾಗೂ ಕುಶಾಲ್(1) ಅವರಿಗೆ ನೇಣುಬಿಗಿದ ಬಳಿಕ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 5 ವರ್ಷಗಳ ಹಿಂದೆ ಫಾರೆಸ್ಟ್ ವಾಚರ್ ಶಿವಕುಮಾರ್ ಜೊತೆಗೆ ಜ್ಯೋತಿ ಮದುವೆಯಾಗಿತ್ತು. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಭಾನುವಾರ ಸಂಜೆ ಅವರು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಮೊದಲು ಮಕ್ಕಳಿಗೂ ನೇಣು ಬಿಗಿದಿದ್ದಾರೆ ಎನ್ನಲಾಗಿದೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.