
ಹಾವೇರಿ: ಮನೆಯಲ್ಲಿ ಬೈಕ್ ಕೊಡಿಸದಿದ್ದಕ್ಕೆ ಮಗ ಆತ್ಮ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೈಕ್ ಕೊಡಿಸದ ಕಾರಣ ಧನರಾಜ್(18) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿದ ಭಾಗಮ್ಮ ನಾಯಕ(43) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.