
ಬೆಂಗಳೂರು: ಅಪಾರ್ಟ್ ಮೆಂಟ್ 10 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನಾಗವಾರ ಸಮೀಪದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ಮೋಹಿನ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮೋಹಿನ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.