alex Certify BIG BREAKING: 6 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ, ವಿದ್ಯಾರ್ಥಿಗಳ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 6 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ, ವಿದ್ಯಾರ್ಥಿಗಳ ಆಕ್ರೋಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಗದೇನಹಳ್ಳಿ ಗೀತಂ ವಿವಿ ಕ್ಯಾಂಪಸ್ ನಲ್ಲಿ ಒಂದು ವಾರದಿಂದ ಆಂಧ್ರ ಪ್ರದೇಶ ಮತ್ತು ಕರ್ನಾಟಕ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆಯುತ್ತಿದ್ದು, ಆಡಳಿತ ಮಂಡಳಿ ಕಣ್ಮುಚ್ಚಿ ಕುಳಿತಿದೆ ಎನ್ನಲಾಗಿದೆ.

ಉಗಾಂಡಾದ ವಿದ್ಯಾರ್ಥಿನಿ ಹಸೀನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಘಟನೆ ಬಳಿಕ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸ್ಟೆಲ್ ಮತ್ತು ಕಾಲೇಜುಗಳ ಕಿಟಕಿ, ಗಾಜುಗಳನ್ನು ಒಡೆದುಹಾಕಿದ್ದಾರೆ. ಹಾಸ್ಟೆಲ್ ಮತ್ತು ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭದ್ರತೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...