alex Certify ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ: ಸಾವನ್ನಪ್ಪಿದ್ದಾಳೆಂದು ಭಾವಿಸಿ ಪಾಪಪ್ರಜ್ಞೆಯಿಂದ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ: ಸಾವನ್ನಪ್ಪಿದ್ದಾಳೆಂದು ಭಾವಿಸಿ ಪಾಪಪ್ರಜ್ಞೆಯಿಂದ ಆತ್ಮಹತ್ಯೆ

ಹಾಸನ: ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಲ್ಲೆಗೊಳಗಾದ ಪತ್ನಿ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ.

ಪ್ರಶಾಂತ್(32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿಟ್ಟಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ. ಪತ್ನಿ ಬಿಂದು ಕೊಲೆ ಮಾಡಲು ಕುಡುಗೋಲಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು, ಆಕೆ ಮೃತಪಟ್ಟಿರುವುದಾಗಿ ತಿಳಿದು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಗೌರಿಕೊಪ್ಪಲು ಗ್ರಾಮದ ಪ್ರಶಾಂತ್ ಎರಡು ವರ್ಷಗಳ ಹಿಂದೆ ಬಿಟ್ಟಗೊಂಡನಹಳ್ಳಿಯ ಬಿಂದು ಜೊತೆ ಮದುವೆಯಾಗಿದ್ದು, ಕೌಟುಂಬಿಕ ಕಲಹದಿಂದಾಗಿ ಬಿಂದು ತವರುಮನೆ ಸೇರಿಕೊಂಡಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಆತ ಬಿಂದು ಮನೆಗೆ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ಕುಡುಗೋಲಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು, ಆಕೆ ಸಾವನ್ನಪ್ಪಿದ್ದಾಳೆಂದು ತಿಳಿದು ಆಕೆಯ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಬಿಂದು ಹಾಸನ ಜಿಲ್ಲಾಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...