ಬೆಂಗಳೂರು: ಪತಿಯ ಅಕ್ರಮ ಸಂಬಂಧದ ಬಗ್ಗೆ ಡೆತ್ ನೋಟ್ ಬರೆದಿಟ್ಟು, ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಂಗೇರಿ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡವರು. ಜುಲೈ 2ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪವಿತ್ರಾ ತನ್ನ ಪತಿ ಚೇತನ್ ಗೌಡ ಮತ್ತು ಅಕ್ರಮ ಸಂಬಂಧ ಹೊಂದಿದ ಯುವತಿಯ ಬಗ್ಗೆ ಡೆತ್ ನೋಟ್ ನಲ್ಲಿ ಬರೆದಿದ್ದು, ವಾಟ್ಸಾಪ್ ಸ್ಟೇಟಸ್ ಹಾಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೊದಲ ಪತಿಗೆ ವಿಚ್ಛೇದನ ನೀಡಿದ್ದ ಪವಿತ್ರಾ ಚೇತನ್ ಗೌಡನನ್ನು ಎರಡನೇ ಮದುವೆಯಾಗಿದ್ದರು. ಆತ ಬೇರೆ ಯುವತಿಯೊಂದಿಗೆ ಆಕ್ರಮ ಸಂಬಂಧ ಹೊಂದಿರುವ ವಿಚಾರ ಗೊತ್ತಾಗಿ ದಂಪತಿ ನಡುವೆ ಜಗಳವಾಗುತ್ತಿತ್ತು ಎನ್ನಲಾಗಿದೆ. ಮೃತರ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಕೆಂಗೇರಿ ಠಾಣೆಯಲ್ಲಿ ಚೇತನ್ ಗೌಡ ಮತ್ತು ಆತನ ಪ್ರೇಯಸಿ ವಿರುದ್ಧ ದೂರು ದಾಖಲಾಗಿದೆ.