ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧ ಮತ್ತು ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಿಚ್ಛೇದನ ಪಡೆಯಲು ಪತ್ನಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ ಹಿನ್ನೆಲೆಯಲ್ಲಿ ನೊಂದ ಪತಿ ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 34 ವರ್ಷದ ಸೈಯದ್ ಅಕ್ಮಲ್ ಅನ್ವರ್ ಆತ್ಮಹತ್ಯೆ ಮಾಡಿಕೊಂಡ ಪತಿ.
ಪತ್ನಿ ಸೇರಿದಂತೆ 7 ಮಂದಿ ವಿರುದ್ಧ ಗೋವಿಂದಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆಪಿ ಮಾರ್ಗನ್ ಕಂಪನಿಯಲ್ಲಿ ಟೆಕ್ಕಿಯಾಗಿದ್ದ ಅಕ್ಮಲ್ 7 ವರ್ಷದ ಹಿಂದೆ ಮದುವೆಯಾಗಿ ಗೋವಿಂದಪುರ ಪ್ಲಾಟ್ ಒಂದರಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಾಗಿದ್ದರು. ಪತಿಯೊಂದಿಗೆ ಗಲಾಟೆ ಮಾಡಿದ ಪತ್ನಿ ತವರು ಮನೆಗೆ ತೆರಳಿದ್ದಳು.
ಅಕ್ಮಲ್ ಒಂಟಿಯಾಗಿ ವಾಸಿಸುತ್ತಿದ್ದ. ಪತ್ನಿಯ ಕಿರುಕುಳದಿಂದ ಬೇಸತ್ತು ಗೋಡೆ ಮೇಲೆ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಸಾವಿಗೆ ಪತ್ನಿ ಹಾಗೂ ಆಕೆಯ ಕುಟುಂಬದವರು ಕಾರಣವೆಂದು ಗೋಡೆ ಮೇಲೆ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ ಮೊಬೈಲ್ ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡ ತಾಯಿಗೆ ಬಂದು ನೋಡಿದಾಗ ಆತ್ಮಹತ್ಯೆ ವಿಚಾರ ಬಳಕೆಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.