ಹಾಸನ: ಆನ್ಲೈನ್ ಗೇಮ್ ನಿಂದ ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಬೇಲೂರಿನಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಚೌಕನಹಳ್ಳಿ ಗ್ರಾಮದ ರಾಕೇಶ್ ಗೌಡ(23) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೇಲೂರು ಬಸ್ ನಿಲ್ದಾಣ ಸಮೀಪದ ಲಾಡ್ಜ್ ನಲ್ಲಿ ರಾಕೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಟಾಟಾ ಕ್ಯಾಪಿಟಲ್ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ ಅನೇಕ ತಿಂಗಳಿಂದ ಆನ್ಲೈನ್ ಗೇಮ್ ಆಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ತಾಯಿಗೆ ಕ್ಷಮೆ ಕೇಳಿರುವ ರಾಕೇಶ್ ಗೌಡ, ಆನ್ಲೈನ್ ಗೇಮ್ ನಿಷೇಧಿಸಬೇಕು. ಯಾರೂ ಆನ್ಲೈನ್ ಗೇಮ್ ಆಡಬೇಡಿ ಎಂದು ಮನವಿ ಮಾಡಿದ್ದಾನೆ. ಬೇಲೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.