
ಮೈಸೂರು: ತಂದೆಯ ಆತ್ಮಹತ್ಯೆಯಿಂದ ಮನನೊಂದು ಮಗ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ.
ಜಕ್ಕಳ್ಳಿ ಕಾಲೋನಿಯ ತಂದೆ ನಾಗೇಗೌಡ(55) ಮತ್ತು ಮಗ ಮಧು(24) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ನಾಗೇಗೌಡ ಮನೆಯಲ್ಲಿಯೇ ನೇಣು ಬಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ನಾಗೇಗೌಡ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಮಧುಗೆ ಆಘಾತವಾಗಿದ್ದು. ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಮಧು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂತರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.