ನವದೆಹಲಿ: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಸುಖಬೀರ್ ಸಿಂಗ್ ಬಾದಲ್ ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದಾರೆ
ಶನಿವಾರ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸುಖಬೀರ್ ಸಿಂಗ್ ಬಾದಲ್ ನಿರ್ಧರಿಸಿ ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದು, ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಟ್ಟಿದ್ದಾರೆ.
ಪಂಜಾಬ್‌ನ ಮಾಜಿ ಶಿಕ್ಷಣ ಸಚಿವ ಡಾ. ದಲ್ಜಿತ್ ಎಸ್. ಚೀಮಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಸ್‌ಎಡಿ ಅಧ್ಯಕ್ಷ ಎಸ್. ಸುಖಬೀರ್ ಸಿಂಗ್ ಬಾದಲ್ ಅವರು ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಡಲು ಇಂದು ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಕ್ಕಾಗಿ ಮತ್ತು ಅಧಿಕಾರಾವಧಿಯುದ್ದಕ್ಕೂ ಪೂರ್ಣ ಹೃದಯದಿಂದ ಬೆಂಬಲ ಮತ್ತು ಸಹಕಾರವನ್ನು ನೀಡಿದ್ದಕ್ಕಾಗಿ ಅವರು ಪಕ್ಷದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.
ಜುಲೈನಲ್ಲಿ ಚಂಡೀಗಢದಲ್ಲಿ ನಡೆದ ಸಭೆಯ ನಂತರ ಶಿರೋಮಣಿ ಅಕಾಲಿದಳ(SAD) ತನ್ನ ಕೋರ್ ಕಮಿಟಿಯನ್ನು ವಿಸರ್ಜಿಸಿತ್ತು.
The SAD President S Sukhbir Singh Badal submitted his resignation to the working Committee of the party today to pave the way for the election of new President. He thanked all the party leaders & workers for expressing confidence in his leadership and extending wholehearted…
— Dr Daljit S Cheema (@drcheemasad) November 16, 2024