ಕೆಆರ್ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಎಂಬ ಸಂಸದೆ ಸುಮಲತಾ ಅಂಬರೀಶ್ ಅವರ ಆರೋಪದ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಸಂಬಂಧ ಮಾತನಾಡಿದ ಅವ್ರು ಸುಮಲತಾ ಈ ರೀತಿಯ ಆರೋಪ ಮಾಡಿದ ಬಳಿಕ ಸರ್ಕಾರವಾಗಲಿ, ಗಣಿ ಇಲಾಖೆಯಾಗಲಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬೇಕಿತ್ತು ಎಂದು ಹೇಳಿದ್ದಾರೆ.
ಸುಮಲತಾ ಅಂಬರೀಶ್ ನಿಖಿಲ್ ಕುಮಾರಸ್ವಾಮಿಯನ್ನ ಚುನಾವಣಾಯಲ್ಲಿ ಸೋಲಿಸಿದ್ದಾರೆ ಎಂಬ ಕಾರಣಕ್ಕೆ ಕುಮಾರಸ್ವಾಮಿ ಈ ರೀತಿ ರಾಜಕೀಯ ಮಾಡ್ತಿದ್ದಾರೆ. ಸುಮಲತಾ ಕೆಆರ್ಎಸ್ ಸುತ್ತ ಮುತ್ತ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಜೆಡಿಎಸ್ ನಾಯಕರ ಗಣಿ ಕಂಪನಿ ಇದೆ ಎಂತಲೂ ಸಂಸದೆ ಹೇಳಿದ್ದಾರೆ. ಆದರೆ ಈ ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಕೂಡ ಭಾಗಿಯಾಗಿದೆ. ಇದೇ ಕಾರಣಕ್ಕೆ ಸರ್ಕಾರ ಧ್ವನಿ ಎತ್ತುತ್ತಿಲ್ಲ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಅದಕ್ಕೆ ನಾಚಿಕೆ, ಮಾನ ಮರ್ಯಾದೆ ಅನ್ನೋದು ಯಾವುದೂ ಇಲ್ಲ ಎಂದು ಹೇಳಿದ್ರು.