alex Certify ಕೊನೆಗೂ ಪ್ರಚಾರದ ಅಖಾಡಕ್ಕೆ ಇಳಿದ ಸುಮಲತಾ ಅಂಬರೀಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊನೆಗೂ ಪ್ರಚಾರದ ಅಖಾಡಕ್ಕೆ ಇಳಿದ ಸುಮಲತಾ ಅಂಬರೀಶ್

ಮೈಸೂರು: ಕೊನೆಗೂ ಪ್ರಚಾರದ ಅಖಾಡಕ್ಕೆ ಇಳಿದ ಸಂಸದೆ ಸುಮಲತಾ ಅಂಬರೀಶ್ ಮೈಸೂರಿನಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಯದುವೀರ್ ಪರವಾಗಿ ಸುಮಲತಾ ಅಂಬರೀಶ್ ಪ್ರಚಾರ ನಡೆಸುವರು. ಬೆಳಗ್ಗೆ 11:30ಕ್ಕೆ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲಿರುವ ಅವರು ಮಧ್ಯಾಹ್ನ 1 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂಜೆ 4:20ಕ್ಕೆ ಮೈಸೂರು ವಿದ್ಯಾರ್ಥಿಗಳ ಜೊತೆ ಸಭೆ ನಡೆಸಲಿದ್ದಾರೆ.

ಮಂಡ್ಯ ಕ್ಷೇತ್ರ ಬಿಟ್ಟು ಮೈಸೂರಿನಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿರುವ ಸುಮಲತಾ ಅಂಬರೀಶ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಬಿಜೆಪಿಗೆ ಸೇರ್ಪಡೆಯಾಗಿರುವ ಅವರು ಎನ್.ಡಿ.ಎ. ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಇಂದು ಮೈಸೂರಿನಲ್ಲಿ ಪ್ರಚಾರ ನಡೆಸಲಿದ್ದು, ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...