alex Certify ಸುಮಲತಾ ರಾಜಕೀಯ ಭವಿಷ್ಯ ಅತಂತ್ರ: ಕುತೂಹಲ ಮೂಡಿಸಿದ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಮಲತಾ ರಾಜಕೀಯ ಭವಿಷ್ಯ ಅತಂತ್ರ: ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಕಗ್ಗಂಟಿಗೆ ತೆರೆ ಬಿದ್ದಿದೆ.

ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ. ಬಿಜೆಪಿ ಲೋಕಸಭೆ ಚುನಾವಣೆ ಉಸ್ತುವಾರಿ ರಾಧಾ ಮೋಹನ್ ದಾಸ್ ಈ ವಿಷಯ ಪ್ರಕಟಿಸುವುದರೊಂದಿಗೆ ಮಂಡ್ಯ ಕ್ಷೇತ್ರದ ಕುರಿತಾದ ಗೊಂದಲಕ್ಕೆ ತೆರೆ ಬಿದ್ದಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ಭವಿಷ್ಯ ಅತಂತ್ರಕ್ಕೆ ಸಿಲುಕಿದ್ದು, ಅವರ ನಡೆ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದಂತೆ ಈ ಚುನಾವಣೆಯಲ್ಲಿಯೂ ಪಕ್ಷೇತರರಾಗಿ ಕಣಕ್ಕಿಳಿಯಲಿದ್ದಾರೆಯೇ ಅಥವಾ ರಾಜಕಾರಣದಿಂದ ದೂರ ಇರುತ್ತಾರೆಯೇ ಎಂಬುದು ಚರ್ಚೆಗೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...