ಕೆಆರ್ಎಸ್ ಡ್ಯಾಂನಲ್ಲಿ ಬಿರುಕು ಮೂಡಿದೆ ಎಂಬ ಸಂಸದೆ ಸುಮಲತಾ ಅಂಬರೀಶ್ರ ಹೇಳಿಕೆ ಇದೀಗ ಸಾಕಷ್ಟು ರಾಜಕೀಯ ಸಂಘರ್ಷಗಳಿಗೆ ನಾಂದಿ ಹಾಡಿದೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ನಡುವೆ ಕನ್ನಂಬಾಡಿ ಕಾಳಗ ನಡೆಯುತ್ತಿರೋದರ ನಡುವೆಯೇ ಮಂಡ್ಯ ಗೌಡ್ತಿ ತಾವು ಈ ಕದನದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ನಾನು ಮಾಡುತ್ತಿರುವ ಕೆಲಸಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗ್ತಿದೆ ಅಂದರೆ ನಾನು ಸರಿಯಾಗಿದ್ದೇನೆ ಎಂದೇ ಅರ್ಥ. ಕೆಆರ್ಎಸ್ ಡ್ಯಾಂ ವಿಚಾರದಲ್ಲಿ ನನ್ನ ತಪ್ಪಿಲ್ಲ. ಕೆಆರ್ಎಸ್ ಡ್ಯಾಂ ಸುರಕ್ಷತೆಯನ್ನ ಮರುಪರಿಶೀಲನೆ ಮಾಡಬೇಕು ಎಂದು ಹೇಳುವ ಮೂಲಕ ನಾನು ಸರಿಯಾದ ಕೆಲಸವನ್ನೇ ಮಾಡಿದ್ದೇನೆ. ಆದರೆ ಹೆಚ್ಡಿಕೆ ಮಾತ್ರ ಡಿಕ್ಟೇಟರ್ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ನನ್ನ ವಿರುದ್ಧ ಮಾತನಾಡಲು ಹಲವರಿಗೆ ತರಬೇತಿಯನ್ನೂ ನೀಡುತ್ತಿದ್ದಾರೆ. ವೈಯಕ್ತಿಕವಾಗಿ ನನ್ನ ಮೇಲೆ ಮಾತಿನ ದಾಳಿ ನಡೆಸಿದ್ದಾರೆ. ನನಗೆ ಜನರ ಬೆಂಬಲ ಇದೆ. ಕೆಆರ್ಎಸ್ ಜಲಾಶಯದ ವಿಚಾರದಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದ್ದಾರೆ.