alex Certify ಬೇಸಿಗೆ ರಜೆಯಲ್ಲೂ 10ನೇ ತರಗತಿ ಮಕ್ಕಳಿಗೆ ಪಾಠ: ವರದಿ ಕೇಳಿದ ಮಕ್ಕಳ ಆಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸಿಗೆ ರಜೆಯಲ್ಲೂ 10ನೇ ತರಗತಿ ಮಕ್ಕಳಿಗೆ ಪಾಠ: ವರದಿ ಕೇಳಿದ ಮಕ್ಕಳ ಆಯೋಗ

ಬೆಂಗಳೂರು: ಬೇಸಿಗೆ ರಜೆಯಲ್ಲಿಯೂ ಕೆಲವು ಶಾಲೆಗಳಲ್ಲಿ 9 ರಿಂದ 10ನೇ ತರಗತಿ ಬಡ್ತಿ ಪಡೆದ ಮಕ್ಕಳಿಗೆ ಪಾಠ ಮಾಡುತ್ತಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವರದಿ ಕೇಳಿದೆ.

ಕೆಲವು ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಯೋಗ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯಿಂದ ವರದಿ ಕೇಳಿದೆ. ಸಿಬಿಎಸ್ಇಗೆ ಸಂಯೋಜಿತವಾದ ಕೆಲವು ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ 10ನೇ ತರಗತಿಗೆ ವಿದ್ಯಾರ್ಥಿಗಳಿಗೆ ತರಗತಿ ನಡೆಸುತ್ತಿರುವ ಕುರಿತು ಮಕ್ಕಳ ಹಕ್ಕುಗಳ ಕಾರ್ಯಕರ್ತರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಸಿಬಿಎಸ್ಇ ಪ್ರಾದೇಶಿಕ ಕಚೇರಿಗೆ ಪತ್ರ ಬರೆದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ 7 ದಿನಗಳಲ್ಲಿ ವರದಿ ನೀಡುವಂತೆ ತಿಳಿಸಿದೆ.

ಬೇಸಿಗೆ ರಜೆಯಲ್ಲಿಯು ತರಗತಿಗೆ ಹಾಜರಾಗುವಂತೆ ಶಾಲೆಗಳು ಮಕ್ಕಳ ಮೇಲೆ ಒತ್ತಡ ಹೇರುವ ಮೂಲಕ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿದ್ದು, ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಮಕ್ಕಳ ಹಕ್ಕುಗಳ ಕಾರ್ಯಕರ್ತ ವಾಸುದೇವ ಶರ್ಮಾ ಅವರು ಆಯೋಗಕ್ಕೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...