alex Certify ಮಳೆಗಾಲದಲ್ಲೂ ಬೇಸಿಗೆ ಬಿಸಿಲಿಗೆ ಪೈಪೋಟಿ ನೀಡುವಂತಹ ತಾಪಮಾನ ದಾಖಲು, ಬಿಸಿಲ ಬೇಗೆಗೆ ಜನ ಕಂಗಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಗಾಲದಲ್ಲೂ ಬೇಸಿಗೆ ಬಿಸಿಲಿಗೆ ಪೈಪೋಟಿ ನೀಡುವಂತಹ ತಾಪಮಾನ ದಾಖಲು, ಬಿಸಿಲ ಬೇಗೆಗೆ ಜನ ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಮಳೆಗಾಲದಲ್ಲಿಯೂ ಬೇಸಿಗೆ ಅವಧಿಯಲ್ಲಿ ದಾಖಲಾಗುವಂತಹ ತಾಪಮಾನ ದಾಖಲಾಗುತ್ತಿದೆ.

ಯಾದಗಿರಿಯಲ್ಲಿ ಆಗಸ್ಟ್ 17ರಂದು 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಹಾಸನದಲ್ಲಿ ಗರಿಷ್ಠ ತಾಪಮಾನ 29.7 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 18.5  ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗಿದೆ. ಈ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ದಾಖಲಾಗುವ ತಾಪಮಾನ ಮಳೆಗಾಲದ ಅವಧಿಯಲ್ಲಿ ದಾಖಲಾಗಿದೆ.

ರಾಜ್ಯದ ಕೆಲವು ಭಾಗದಲ್ಲಿ ಮೋಡ ಕವಿದ ವಾತಾವರಣ ಇದ್ದರೆ ಮತ್ತೆ ಕೆಲವು ಕಡೆ ಬೇಸಿಗೆ ರೀತಿಯ ವಾತಾವರಣ ಕಂಡು ಬರುತ್ತಿದೆ. ಬಿಸಿಲಿನ ಬೇಗೆಯಿಂದ ಜನ ಬಸವಳಿಯುವಂತಾಗಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ನಷ್ಟಿದೆ. ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮೀರಿದೆ.

ಆಗಸ್ಟ್ 18ರಿಂದ ಮುಂದಿನ ಒಂದು ವಾರ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...