ಬೆಂಗಳೂರು: ಫೆಂಗಲ್ ಚಂಡಮಾರುತ ಅಬ್ಬರದ ಹಿನ್ನಲೆಯಲ್ಲಿ ಇಂದು ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ರಜೆ ರದ್ದು ಮಾಡಲಾಗಿದೆ.
ಇಂದು ಭಾನುವಾರವಾದರೂ ಬಿಬಿಎಂಪಿ ಅಧಿಕಾರಿಗಳಿಗೆ ರಜೆ ಇರುವುದಿಲ್ಲ. ಹವಾಮಾನ ಇಲಾಖೆಯಿಂದ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಭಾನುವಾರದ ರಜೆ ರದ್ದು ಮಾಡಲಾಗಿದ್ದು, ಎಂದಿನಂತೆ ಕಾರ್ಯನಿರ್ವಹಿಸಲು ತಿಳಿಸಲಾಗಿದೆ.
ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆ ಆಗುವ ಸಾಧ್ಯತೆ ಇದೆ. ತಗ್ಗು ಪ್ರದೇಶ, ಕೆರೆ ಅಂಗಳ ಪ್ರದೇಶದಲ್ಲಿ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ನಿರ್ಲಕ್ಷ ವಹಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಚಂಡಮಾರುತ ಪರಿಣಾಮ ಸದ್ಯ ಬೆಂಗಳೂರು ನಗರದಲ್ಲಿ ನಿನ್ನೆ ರಾತ್ರಿಯಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಎಲ್ಲರೂ ಎಂದಿನಂತೆ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.