ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 10ರಂದು ಆಯೋಜಿಸಿರುವ ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಅನುಕೂಲವಾಗುವಂತೆ ಎಂದಿಗಿಂತ ಒಂದು ಗಂಟೆ ಮೊದಲೇ ಮೆಟ್ರೋ ರೈಲು ಸಂಚಾರ ಆರಂಭಿಸಲಾಗುವುದು.
ಹಸಿರು ಮತ್ತು ನೇರಳೆ ಮಾರ್ಗಗಳ ಎಲ್ಲಾ ನಾಲ್ಕು ಟರ್ಮಿನಲ್ ಗಳಲ್ಲಿ ವಾರದ ದಿನಗಳಲ್ಲಿ ಬೆಳಗ್ಗೆ 5 ಗಂಟೆಗೆ, ಪ್ರತಿ ಭಾನುವಾರ 7 ಗಂಟೆಗೆ ಮೆಟ್ರೋ ರೈಲು ಕಾರ್ಯಾಚರಣೆ ಆರಂಭವಾಗುತ್ತದೆ. ಈ ಭಾನುವಾರ ಮಾರ್ಚ್ 10ರಂದು ಪೊಲೀಸ್ ಇಲಾಖೆ ಓಟದ ಸ್ಪರ್ಧೆ ಕಾರಣ ಬೆಳಿಗ್ಗೆ 6 ಗಂಟೆಗೆ ಮೆಟ್ರೋ ರೈಲು ಕಾರ್ಯಾಚರಣೆ ಆರಂಭವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್. ತಿಳಿಸಿದೆ.