ಬೆಂಗಳೂರು: ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಕೇಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ.
ಮಾನನಷ್ಟ ಕೊಕದ್ದಮೆ ರದ್ದು ಕೋರಿ ಸುನೀಲ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಸುನೀಲ್ ಕುಮಾರ್ ಅರ್ಜಿ ವಜಾಗೊಳಿಸಿದ್ದು, ಕೇಸ್ ರದ್ದು ಮಾಡಲು ನಿರಾಕರಿಸಿದೆ.
ಚುನಾವಣೆ ಸಂದರ್ಭಗಳಲ್ಲಿ ರಾಜಕೀಯ ಪಕ್ಷಗಳು ಹಮ್ಮಿಕೊಂಡಿರುವ ಅಭಿವೃದ್ದಿ ಕಾರ್ಯ, ಅವುಗಳ ಅನುಷ್ಠಾನಗಳ ಬಗ್ಗೆ ಚರ್ಚೆ ಬದಲು ಸ್ಪರ್ಧಿ-ಪ್ರತಿಸ್ಪರ್ಧಿಗಳ ನಡುವೆ ಪರಸ್ಪರ ವಿರುದ್ಧ ಭಾಷಣಗಳು, ರಾಜಕೀಯ ಕೆಸರೆರಚಾಟಗಳೇ ನಡೆಯುತ್ತಿವೆ. ಈ ರೀತಿಯ ವರ್ತನೆ ನಿಲ್ಲಬೇಕು ಎಂದು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾರ್ಕಳ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ಸ್ಪರ್ದಿಸಿದ್ದರು. ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸುನೀಲ್ ಕುಮಾರ್, ಪ್ರಮೋದ್ ಮುತಾಲಿಕ್ ವಿರುದ್ಧ ಮಾತನಾಡಿದ್ದರು. ಉತ್ತರ ಕರ್ನಾಟಕದಲ್ಲಿ ಟೈಗರ್ ಗ್ಯಾಂಗಿನ ನೆಪದಲ್ಲಿ ಮುತಾಲಿಕ್ ಹಿಂದೂಗಳ ಹತ್ಯೆ ಮಾಡಿದ್ದಾರೆ. ಆತ ಒಬ್ಬ ಡೀಲ್ ಮಾಸ್ಟರ್. ಹಣ ಪಡೆದು ಸ್ಪರ್ಧೆ ಮಾಡ್ತಾರೆ ಎಂದು ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಮನಹಾನಿ ಕೇಸ್ ದಾಖಲಿಸಿದ್ದರು.