
ಡಿಸೆಂಬರ್ 29 ರ ಭಾನುವಾರದಂದು ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ – ಆಪರೇಟಿವ್ ಬ್ಯಾಂಕ್ ಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಈಗಾಗಲೇ ಆರಂಭವಾಗಿದೆ.
ಈ ಚುನಾವಣೆಯಲ್ಲಿ ಮರಾಠ ಸಮಾಜದ ಪ್ರಮುಖರಾದ ಎಸ್. ಸುನಿಲ್ ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಅವರೊಂದಿಗೆ ಸ್ನೇಹಿತರು ಆಪಾರ ಸಂಖ್ಯೆಯಲ್ಲಿ ಹಾಜರಿದ್ದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಸುನಿಲ್ ಕುಮಾರ್, ಈ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಸಿಟಿ ಕೋ – ಆಪರೇಟಿವ್ ಬ್ಯಾಂಕ್ ಸದಸ್ಯರಲ್ಲಿ ಮನವಿ ಮಾಡಿದರಲ್ಲದೇ, ತಾವು ಆಯ್ಕೆಯಾದರೆ ಷೇರುದಾರರ ಹಿತ ಕಾಪಾಡಲು ಶ್ರಮಿಸುವುದಾಗಿ ತಿಳಿಸಿದರು.
ಸಿಟಿ ಕೋ – ಆಪರೇಟಿವ್ ಬ್ಯಾಂಕ್ ಚುನಾವಣೆಯು ಡಿಸೆಂಬರ್ 29 ರ ಭಾನುವಾರ ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ವಾಸವಿ ಸ್ಕೂಲ್ ಆವರಣದಲ್ಲಿ ನಡೆಯಲಿದ್ದು, ಬೆಳಿಗ್ಗೆ 9:00 ರಿಂದ ಸಂಜೆ 4:00 ಗಂಟೆಯವರೆಗೆ ಮತದಾನ ಪ್ರಕ್ರಿಯೆ ಇರುತ್ತದೆ.