
ಇಂದು ಐಪಿಎಲ್ ನ 12ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿವೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿದ್ದು, ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ. ಕಳೆದ ಪಂದ್ಯದಲ್ಲಿ 277 ರನ್ ಬಾರಿಸುವ ಮೂಲಕ ಆರ್ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದೆ.
ಒಂದೇ ಪಂದ್ಯದಲ್ಲಿ ಹೈದರಾಬಾದ್ ತಂಡದ ನಾಲ್ಕು ಬ್ಯಾಟ್ಸ್ಮನ್ಗಳು ಅರ್ಧಶತಕ ಸಿಡಿಸಿರುವುದು ಸಹ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.
ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟನ್ಸ್ ಈ ಎರಡು ತಂಡಗಳಲ್ಲೂ ಸಾಕಷ್ಟು ಆಲ್ ರೌಂಡ್ ಗಳಿದ್ದು, ದೊಡ್ಡ ಮೊತ್ತದ ಪಂದ್ಯವಾಗುವ ಸಾಧ್ಯತೆ ಇದೆ. ಮತ್ತೊಂದು ಥ್ರಿಲ್ಲರ್ ಪಂಧ್ಯವನ್ನು ನೋಡಲು ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದಕ್ಕೂ ಮುನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಸೆಣಸಾಡಲಿವೆ.